=== ಇವಗೇಕೆ ಶೃಂಗಾರ. ರಾಗ: ಸಾರಂಗ. ತ್ರಿಪುಟ ತಾಳ === == ಪಲ್ಲವಿ: == ಇವಗೇಕೆ ಶೃಂಗಾರ ಇವಗೇಕೆ ಭಂಗಾರ \\ == ಅನುಪಲ್ಲವಿ: == ಕಾಡ ಕರಡಿಯಂತೆ ಪೋಲುವ ದೇಹಕ್ಕೆ \\ == ಚರಣ ೧:== ನೀರೊಳಗೆ ಮುಳುಗಿದವಗೆ ಪರಿಮಳ ಗಂಧವೇಕೆ ಭಾರ ಪೊತ್ತವಗೆ ಪನ್ನೀರು ಏಕೆ \\ ಕೋರೆ ದಾಡೆಯ ಘೋರ ಮುಖಗೇಕೆ ಕನ್ನಡಿ ಕರುಳ ಹಾರ ಧರಿಸಿದವಕೆ ಹಾರ ಪದಕವೇಕೆ\\ \\ ==ಚರಣ ೨: == ನೆಲವನಳೆದವಗೆ ಕಾಲ ಕಿರುಗೆಜ್ಜೆ ಏಕೆ ತಲೆ ತಾಯ ತರಿದವಗೆ ಮರಿಯಾದೆಯೇಕೆ \\ ಚೇಲಾರಿವೆಯ ಉಟ್ಟವಗೇಕೆ ಪೀತಾಂಬರ ಪಾಲ ಕದ್ದು ಕುಡಿದವಗೆ ಕುಸುಮ ಕೇಸರಿಯೇಕೆ \\ ==ಚರಣ ೩: == ಬತ್ತಲೆ ನಿಂತಿದ್ದವಗೆ ಕಸ್ತೂರಿ ತಿಲಕವೇಕೆ ಉತ್ತಮ ಹಯವನೇರಿದವಕೆ ಪುಷ್ಪಕವೇಕೆ \\ ಚಿತ್ತಜನಯ್ಯ ಶ್ರೀ ಪುರಂದರ ವಿಟ್ಟಲ ಭಕ್ತರ ಸಲಹುವಗೆ ಬಹಿರಂಗದಾಭರಣವೇಕೆ \\