ಇವಗೇಕೆ ಶೃಂಗಾರ. ರಾಗ: ಸಾರಂಗ. ತ್ರಿಪುಟ ತಾಳ
ಪಲ್ಲವಿ:
ಇವಗೇಕೆ ಶೃಂಗಾರ ಇವಗೇಕೆ ಭಂಗಾರ
ಅನುಪಲ್ಲವಿ:
ಕಾಡ ಕರಡಿಯಂತೆ ಪೋಲುವ ದೇಹಕ್ಕೆ
ಚರಣ ೧:
ನೀರೊಳಗೆ ಮುಳುಗಿದವಗೆ ಪರಿಮಳ ಗಂಧವೇಕೆ ಭಾರ ಪೊತ್ತವಗೆ ಪನ್ನೀರು ಏಕೆ
ಕೋರೆ ದಾಡೆಯ ಘೋರ ಮುಖಗೇಕೆ ಕನ್ನಡಿ ಕರುಳ ಹಾರ ಧರಿಸಿದವಕೆ ಹಾರ ಪದಕವೇಕೆ
ಚರಣ ೨:
ನೆಲವನಳೆದವಗೆ ಕಾಲ ಕಿರುಗೆಜ್ಜೆ ಏಕೆ ತಲೆ ತಾಯ ತರಿದವಗೆ ಮರಿಯಾದೆಯೇಕೆ
ಚೇಲಾರಿವೆಯ ಉಟ್ಟವಗೇಕೆ ಪೀತಾಂಬರ ಪಾಲ ಕದ್ದು ಕುಡಿದವಗೆ ಕುಸುಮ ಕೇಸರಿಯೇಕೆ
ಚರಣ ೩:
ಬತ್ತಲೆ ನಿಂತಿದ್ದವಗೆ ಕಸ್ತೂರಿ ತಿಲಕವೇಕೆ ಉತ್ತಮ ಹಯವನೇರಿದವಕೆ ಪುಷ್ಪಕವೇಕೆ
ಚಿತ್ತಜನಯ್ಯ ಶ್ರೀ ಪುರಂದರ ವಿಟ್ಟಲ ಭಕ್ತರ ಸಲಹುವಗೆ ಬಹಿರಂಗದಾಭರಣವೇಕೆ
You are here: Welcome » ivageke-shrngara